ಕೋಲಾರ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಜಿಲ್ಲೆಯ ಕುಪ್ಪನಹಳ್ಳಿ ಬಳಿ ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಈ ದಾರುಣ ಘಟನೆ ನಡೆದಿದ್ದು, ಮೃತರು ಮಹೇಶ್ (45), ರತ್ನಮ್ಮ (60), ಉದ್ಧಿತ್ (2) ಹಾಗೂ ಬೈಕ್ ಸವಾರರಾಗಿದ್ದಾರೆ.
ಅಪಘಾತದ ವೇಳೆ ಕಾರು ನಿಯಂತ್ರಣ ತಪ್ಪಿ ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಗಾರಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.