ಮಾದಪ್ಪನ ಉತ್ಸವವನ್ನು ಕಣ್ತುಂಬಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು

123 2025 04 24t094032.295

ಮಲೆ ಮಹದೇಶ್ವರ ಬೆಟ್ಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ನಂತರ ನಡೆದ ಮಾದಪ್ಪನ ಉತ್ಸವದಲ್ಲಿ ಭಾಗವಹಿಸಿದರು.

ಉತ್ಸವದ ಸಂದರ್ಭದಲ್ಲಿ ಸಚಿವರು, ಮಾದಪ್ಪನ ಉತ್ಸವ ಮೂರ್ತಿಯನ್ನು ಹೊತ್ತ ಚಿಕ್ಕ ರಥದ ಜೊತೆಗೆ ಚಿಕ್ಕ ಬೆಳ್ಳಿ ಗದೆಯನ್ನು ಹಿಡಿದು ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ಮಾಡಿದರು. ಬಳಿಕ ಬೆಳ್ಳಿ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸಂಜೆಯೇ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅವರು ಕಳೆದ ರಾತ್ರಿಯೂ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version