ಮದ್ದೂರು: ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಈ ಕುರಿತು ದೂರು ದಾಖಲಿಸಲು ಮದ್ದೂರು ಠಾಣೆ ಪೊಲೀಸರು ಹಿಂಜರಿದಿದ್ದಾರೆ ಎಂದು ಪತಿ ವೆಂಕಟೇಶ್ ಆರೋಪಿಸಿದ್ದಾರೆ.
9 ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ವೆಂಕಟೇಶ್, ಆಕೆಯನ್ನು ಹಿಂದೂ ಧರ್ಮಕ್ಕೆ ಮತಾಂತರಿಸಿದ್ದರು. ಜ. 23ರಂದು ಪತ್ನಿ ತಮ್ಮ ತವರು ಮನೆ ಕೊಡಗು ಜಿಲ್ಲೆಯ ಸೋಮವಾರಪೇಟೆಗೆ ತೆರಳಿದ್ದು, ನಂತರ ಪತ್ನಿ ಮತ್ತು ಮಗ ವಾಪಸ್ಸು ಬಂದಿಲ್ಲ ಎಂದು ಅವರು ದೂರು ನೀಡಿದ್ದಾರೆ.
ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವೆಂಕಟೇಶ್ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮದ್ದೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಘೋಷಣೆ ಕೂಗಿದ್ದಾರೆ.