ವರದಿ: ಮೂರ್ತಿ.ಬಿ ನೆಲಮಂಗಲ
ನೆಲಮಂಗಲ ಗ್ರಾಮಾಂತರ ಪೊಲೀಸರು ಇಬ್ಬರು ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಆರ್.ಟಿ. ನಗರ ನಿವಾಸಿಗಳಾದ ಮಹಮ್ಮದ್ (25) ಮತ್ತು ಮಹಮ್ಮದ್ ತಬ್ರೇಜ್ (22) ಎಂಬ ಆರೋಪಿಗಳು ರಾತ್ರಿಯ ವೇಳೆ ಒಂಟಿಯಾಗಿ ಸಂಚರಿಸುವವರನ್ನು ಗುರಿಯಾಗಿಟ್ಟುಕೊಂಡು ದರೋಡೆ ಮಾಡುತ್ತಿದ್ದರು. ಟೋಲ್ ಗೇಟ್ ಬಳಿಯ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇವರನ್ನು ಬಲೆಗೆ ಬೀಳಿಸಿದ್ದಾರೆ.
ಪೊಲೀಸರು ಆರೋಪಿಗಳಿಂದ ಕಾರು, ದೊಣ್ಣೆ, ಚಾಕು, ಮತ್ತು ತಲ್ವಾರ್ ಸೇರಿದಂತೆ ದರೋಡೆಗೆ ಬಳಸುತ್ತಿದ್ದ ಆಯುಧಗಳನ್ನು ಜಪ್ತಿ ಮಾಡಿದ್ದಾರೆ. ಈ ಇಬ್ಬರು ದರೋಡೆಕೋರರು ರಾತ್ರಿಯ ಸಮಯದಲ್ಲಿ ಒಂಟಿಯಾಗಿ ಸಂಚರಿಸುವವರನ್ನು ಗುರಿಯಾಗಿಟ್ಟುಕೊಂಡು ಭಯ ಸೃಷ್ಟಿಸಿ, ದರೋಡೆ ಮಾಡುತ್ತಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಲಾಗಿದೆ. ಮುಂದಿನ ತನಿಖೆಯಲ್ಲಿ ಆರೋಪಿಗಳ ಇತರ ಕೃತ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಮುಂದುವರೆದಿದ್ದಾರೆ.