ಶಿವಮೊಗ್ಗ: ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ಕೇಂದ್ರ ಸಚಿವರು ಮಂಜುನಾಥ್ ರಾವ್ ಅವರ ವಿಜಯನಗರದ ಮಂಜು ಶ್ರೀ ನಿವಾಸಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಡಿ.ಎಸ್. ಅರುಣ್ ಕೂಡ ಉಪಸ್ಥಿತರಿದ್ದರು.
ಮಂಜುನಾಥ್ ರಾವ್ ಅವರ ನಿವಾಸದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, ಮೃತರಿಗೆ ಗೌರವ ಸೂಚಿಸಿದ್ದಾರೆ. ಶಿವಮೊಗ್ಗದ ಜನತೆ ಭಾವುಕರಾಗಿ ಅಂತಿಮ ದರ್ಶನ ಪಡೆದಿದ್ದು, ಈ ದುಃಖದ ಸಂದರ್ಭದಲ್ಲಿ ಕುಟುಂಬದ ಜೊತೆಗೆ ಒಗ್ಗಟ್ಟಿನಿಂದ ನಿಂತಿದ್ದಾರೆ.
ಅಂತ್ಯಸಂಸ್ಕಾರದ ಕಾರ್ಯಕ್ರಮವನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಸಲಾಗುತ್ತಿದ್ದು, ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.