ಬಿಜೆಪಿ ಕಾರ್ಯಕರ್ತ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಕ್ಕೆ ನಾಯಕರು ಕೆಂಡಕಾರಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಣ, ಹೆಂಡ ಮತ್ತು ತೋಳ್ಬಲಕ್ಕೆ ಹೆಸರಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ, ಈಗ ಬಂಡೆ ಪುಡಿಯಾಗುವ ಸಮಯ ಬಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ವಿರುದ್ಧ ನಿಂತವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿದ್ದಾರೆ. ಇದಕ್ಕೆ ಮತದಾರರೆ ಉತ್ತರ ನೀಡಲಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನು ಇದೇ ವಿಚಾರವಾಗಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್ .ಅಶೋಕ್, ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ ಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಅಂತ ಕಿಡಿಕಾರಿದ್ದಾರೆ.