ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯಲು ಒತ್ತಡ: ದಿನೇಶ್ ಗುಂಡೂರಾವ್ ಖಂಡನೆ

123 (35)

ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ Xನಲ್ಲಿ ಟ್ವೀಟ್ ಮಾಡಿದ್ದಾರೆ.

 

ADVERTISEMENT
ADVERTISEMENT

ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು.

ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Exit mobile version