ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಪ್ರಮುಖ ಫಲಿತಾಂಶ ಇಂದು, ಏಪ್ರಿಲ್ 8, 2025ರಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಫಲಿತಾಂಶ ಪ್ರಕಟಿಸಿದೆ. ಮಾರ್ಚ್1 ರಿಂದ ಮಾರ್ಚ್ 20, 2025ರವರೆಗೆ ನಡೆದ ಈ ಪರೀಕ್ಷೆಯಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈಗ ಎಲ್ಲರ ಗಮನವೂ ಫಲಿತಾಂಶದ ಮೇಲೆ ನೆಟ್ಟಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 12:30ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗಿದೆ. ನಂತರ, ಮಧ್ಯಾಹ್ನ 1:30ರಿಂದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್, ರಿಜಿಸ್ಟ್ರೇಷನ್ ನಂಬರ್ ಮತ್ತು ಕ್ಯಾಪ್ಚಾ ಕೋಡ್ ಬಳಸಿ ತಮ್ಮ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಉಡುಪಿ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ಕಲಾ ವಿಭಾಗದಲ್ಲಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ, 597 ಅಂಕ ಪಡೆದಿದ್ದಾರೆ. ಬಳ್ಳಾರಿ ನಿರ್ಮಾಲಾ ದ್ವಿತೀಯ ಸ್ಥಾನ 73% ಪಡೆದಿದ್ದಾರೆ.
ರಾಜ್ಯ |
ಸ್ಥಾನ |
ಉಡುಪಿ |
1 ನೇ ಸ್ಥಾನ |
ದಕ್ಷಿಣ ಕನ್ನಡ |
2 ನೇ ಸ್ಥಾನ |
ಬೆಂಗಳೂರು ದಕ್ಷಿಣ |
3 ನೇ ಸ್ಥಾನ |
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಯಾರೆಲ್ಲಾ ಉತ್ತೀರ್ಣರಾಗಿದ್ದಾರೆ ಎಂಬ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಆದರೆ, ಈಗಲೇ ಫೈಲ್ ರೂಪದಲ್ಲಿ ಫಲಿತಾಂಶದ ವಿವರ ನೀಡಲು ಸಾಧ್ಯವಾಗದ ಕಾರಣ, ಶೀಘ್ರದಲ್ಲೇ ಎಲ್ಲ ಮಾಹಿತಿ ಲಭ್ಯವಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದೇ ಸಂದರ್ಭದಲ್ಲಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳ ದಿನಾಂಕವನ್ನು ಈಗಲೇ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಈಗಲೇ ಸಿದ್ಧತೆ ಆರಂಭಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಈ ಬಾರಿ ವಿಶೇಷವಾಗಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಮಾನಿಸಿದ್ದಾರೆ.ಶಿಕ್ಷಣ ಇಲಾಖೆಯ ಈ ಮಹತ್ವದ ಹೆಜ್ಜೆಗೆ ಮುಖ್ಯಮಂತ್ರಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ.