ಹಾಸನ : ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಬಿಎಸ್ ವೈ, ಡಿಸಿಎಂ ಡಿಕೆ ಶಿವಕುಮಾರ್ ರನ್ನು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಮುಸ್ಲಿಂ ಸಮುದಾಯಕ್ಕೆ ಕಿರುಕುಳ ನೀಡುತ್ತಿದೆ ಎಂದಿದ್ದ ಡಿಕೆಶಿ ವಿರುದ್ಧ, ಅವನೊಬ್ಬ ತಲೆತಿರುಕ, ಅವನ ಮಾತನ್ನು ನಂಬುವ ಅವಶ್ಯಕತೆಯಿಲ್ಲ, ಕ್ಷುಲ್ಲಕ ಕಾರಣಗಳನ್ನು ಹೇಳಿ ಮುಸಲ್ಮಾನರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾನೆ. ಬಿಜೆಪಿ ಯಾವತ್ತೂ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಅಂತ ಭೇದಭಾವ ಮಾಡಲ್ಲ, ತಮಗೆ ಎಲ್ಲರೂ ಒಂದೇ ಎಂದು ಹೇಳಿದರು.