ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನರು ಕೇಂದ್ರ ಪ್ರಹ್ಲಾದ ಜೋಶಿ ಪರವಾಗಿ ನಿಂತಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಸ್ವಾಮೀಜಿಗಳು ಮುಂದಾಗಬಾರದು ಅಂತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಎಸ್ ವೈ, ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ.
ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೇಳಿಕೊಳ್ಳುತ್ತೇನೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಅಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.