ದೇಶಾದ್ಯಂತ ಈಗ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಭಾರಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಮಾತ್ನಾಡಿದ್ದು, ಪ್ರಜ್ವಲ್ ರೇವಣ್ಣ ವಿಡಿಯೋಗಳು ನನಗೆ 2023ರಲ ಬಂದಿತ್ತು. ಆಗ ಪ್ರಜ್ವಲ್ ರೇವಣ್ಣ ಕೋರ್ಟ್ನಿಂದ ಸ್ಟೇ ತಂದಿದ್ರು. ಪ್ರಜ್ವಲ್ ರೇವಣ್ಣ ಡ್ರೈವರ್ ಕಾರ್ತಿಕ್ ನನ್ನ ಬಳಿಯಿದ್ದ ವಿಡಿಯೋಗಳನ್ನು ನೋಡಿದ್ದೆ ಎಂದು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕಾರ್ತಿಕ್ ಬಂದು ನನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಹಲವಾರು ಅಶ್ಲೀಲ ವೀಡಿಯೋ ಇತ್ತು. ಅದನ್ನು ನಾನು ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸೇರಿ ಕೆಲ ಕಾಂಗ್ರೆಸ್ ನಾಯಕರಿಗೆ ಕಳುಹಿಸಿದೆ ಅನ್ನೋ ವಿಷಯವನ್ನೂ ತಿಳಿಸಿದ್ರು. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪತ್ರ ಬರೆದು ಇ ಮೇಲ್ ಮಾಡಲಾಗಿತ್ತು. ಆದ್ರೆ ಇ ಮೇಲ್ ಡಿಲಿವರ್ ಆಗಿರಲಿಲ್ಲ. ನಂತರ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಛೇರಿಗೆ ನೀಡಿದ್ದೆ ಅವರು ಹೇಳಿದಂತೆ ಪತ್ರ ಅವರಿಗೂ ತಲುಪಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ.