ಬೆಂಗಳೂರಿನ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ, ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು. ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು. ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.