ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಹೇಳಿಕೆಯನ್ನ ಕಾಂಗ್ರೆಸ್ ತಿರುಚಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿವಾದಕ್ಕೆ ಸಂಬಂಧಿಸಿದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದೆ ಆಕ್ರೋಶ ಹೊರಹಾಕಿದ್ದಾರೆ. ಲಾಟರಿ ಕಿಂಗ್ ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್ ಸರಕಾರದ ಸಾಧನೆ ಅಂತ ಕೆಂಡಕಾರಿದ್ದಾರೆ.