ಮೇಕೆದಾಟು ಯೋಜನೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಧ್ಯೆ ಜಟಾಪಟಿ ಶುರುವಾಗಿದೆ. ಮೇಕೆದಾಟು ಯೋಜನೆಗೆ ಕುಮಾರಸ್ವಾಮಿ ಏನೂ ಮಾಡಿಲ್ಲ ಎಂದಿದ್ದ ಡಿಸಿಎಂ ವಿರುದ್ಧ ಹೆಚ್ ಡಿಕೆ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರ ಇರುವುದು ನಿಮ್ಮ ಕೈಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಡಿ.ಕೆ. ಶಿವಕುಮಾರ್ ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಅಂತ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸರಣಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.