ರಣ ಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ ,ಮನೆಯಿಂದ ಹೊರ ಹೋಗೋಕೇ ಹಿಂದೇಟು ಹಾಕುತ್ತಿದ್ದಾರೆ , ಫ್ಯಾನ್, ಕೂಲರ್ ಅಥವಾ ಎಸಿಯಂತಹ ವಸ್ತುಗಳ ಸಹಾಯದಿಂದ ತಮ್ಮ ಮನೆಗಳಲ್ಲಿನ ಶಾಖದಿಂದ ಪರಿಹಾರವನ್ನು ಪಡೆಯುತ್ತಾರೆ. ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಬಿಸಿಲಿನ ಬೇಗೆ ಎದುರಾಗಿದೆ. ಆದ್ದರಿಂದ ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈದೀಗ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. manjeetmalik567 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.