ಕೊಪ್ಪಳ : ನ್ಯಾಯಮೂರ್ತಿಗಳಾದ ಬಿಆರ್ ಘಾನವಿ ಹಾಗೂ ಕೆವಿ ವಿಶ್ವನಾಥನ್ ಅವರ ದ್ವಿಸದಸ್ಯ ನ್ಯಾಯಪೀಠ ಈ ಕುರಿತು ತೀರ್ಪು ನೀಡಿದೆ.ಯಾವುದೇ ಆರೋಪಿಯಾದರೂ, ಆತನ ಕುಟುಂಬಕ್ಕೂ ಕೂಡಾ ಆರ್ಟಿಕಲ್ 12ರ ಪ್ರಕಾರ ವಸತಿಯ ಹಕ್ಕು ಇದೆ. ಕುಟುಂಬದಲ್ಲಿ ಯಾರೋ ಒಬ್ಬ ತಪ್ಪು ಮಾಡಿದ ಎಂಬ ಕಾರಣಕ್ಕೆ ಇಡೀ ಕುಟುಂಬಕ್ಕೆ ಶಿಕ್ಷೆ ನೀಡುವುದು ಸಂವಿಧಾನ ಬಾಹಿರ ಎಂದು ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ಕೊಪ್ಪಳ ಜಿಲ್ಲೆ ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಜಾಮೀನು ಮಂಜೂರು ಮಾಡಿದೆ.
10 ವರ್ಷಗಳ ಹಿಂದೆ ನಡೆದ ಗ್ರಾಮದ ದಲಿತರ ದೌರ್ಜನ್ಯ ಕೇಸ್ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೊಂದು ಐತಿಹಾಸಿಕ ತೀರ್ಪು ಎನ್ನಲಾಗಿತ್ತು. ಇಡೀ ಗ್ರಾಮದ ಬಹುತೇಕ ಮನೆಗಳ ಸದಸ್ಯರು ಜೈಲು ಪಾಲಾಗಿದ್ದರು. ಆ ಬಳಿಕ ಅವರೆಲ್ಲಾ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಎ1 ಮಂಜುನಾಥ ಜಾಮೀನಿಗೆ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಆತನಿಗೆ ಬೇಲ್ ಸಿಕ್ಕಿಲ್ಲ. ಪ್ರತಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ. ಇನ್ನೂ, ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ಇದನ್ನು ಓದಿ : ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ ‘ದಾಸವರೇಣ್ಯ ಶ್ರೀ ವಿಜಯ ದಾಸರು’ ಚಿತ್ರದ ಸೀಕ್ವೆಲ್ ಗೆ ಚಾಲನೆ
2014 ರ ಆಗಸ್ಟ್ 28 ರಂದು ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಇದೆ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ ಮೊರೆ ಹೋಗಿದ್ದರು. ಇಂದು (ನ.13) ಹೈಕೋರ್ಟ್ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಾಮೀನು ನೀಡಿದೆ.
ಏನಿದು ಕೇಸ್?
ಕೊಪ್ಪಳ ಗಂಗಾವತಿ ಮರಕುಂಬಿ ಗ್ರಾಮದಲ್ಲಿ 2014 ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಇರುವ ಕುರಿತು ಗಲಾಟೆ ನಡೆದಿತ್ತು. ಆಮೇಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದರು. ಇತ್ತ ಇದೇ ದಿನ ಗಂಗಾವತಿಯಲ್ಲಿ ಮರಕುಂಬಿ ಗ್ರಾಮದ ಕೆಲ ಸರ್ವಣಿಯರು ಸಿನಿಮಾ ನೋಡಲು ಹೋದಾಗ ದಲಿತ ಯುವಕರು ಗಲಾಟೆ ನಡೆಸಿದ್ದರು. ಇದಾದ ಬಳಿಕ ರಾತ್ರಿಯ ವೇಳೆಯಲ್ಲಿ ದಲಿತರ ಕೇರಿಗೆ ಸರ್ವಣೀಯರು ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅದೃಷ್ಟಕ್ಕೆ ಯಾವುದೇ ಪ್ರಾಣ ಹಾನಿ ಆಗಿರಲಿಲ್ಲ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿನ ಆರೋಪಿಗಳಲ್ಲಿ ಕೆಲವರು ಮೃತಪಟ್ಟಿದ್ದಾರೆ. ಕೆಲವರದ್ದು ಹೆಸರು ಪುನಾರಾರ್ವತನೆಯಾಗಿದೆ. ಹೀಗಾಗಿ, 101 ಆರೋಪಿಗಳ ವಿರುದ್ಧ ಅಪರಾಧ ಸಾಬೀತಾದ ಹಿನ್ನಲೆ ಕೊಪ್ಪಳ ನ್ಯಾಯಾಲಯದಿಂದ ಶಿಕ್ಷೆಯ ಆದೇಶ ಹೊರ ಬಿದ್ದಿತ್ತು. ಕಳೆದ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು.