ನೀವು ಯಾರನ್ನಾದರೂ ‘ಹೇ ಡಾರ್ಲಿಂಗ್’ ಎಂದು ಕರೆದರೆ, ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ಕೋರ್ಟ್ ಮೆಟ್ಟಿಲೇರಬೇಕಾಗುತ್ತೆ.
ಹೌದು … “ಡಾರ್ಲಿಂಗ್” ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಪ್ರಕರಣ ಒಂದರ ವಿಚಾರಣೆ ವೇಳೆ ಹೇಳಿದ್ದಾರೆ. ಸದ್ಯ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.