ಹಾಸನ: ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಉದ್ಭವಿಸಿದ್ದ ಗಡ್ಡ ವಿವಾದವು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಮಂಡಳಿಯ ನಡುವಿನ ಮಾತುಕತೆಯ ಮೂಲಕ ಸುಖಾಂತ್ಯ ಕಂಡಿದೆ. ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿದ್ದಾರೆ. ಕಾಲೇಜಿನ ಶಿಸ್ತು ಮತ್ತು ನಿಯಮಗಳನ್ನು ಪಾಲಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ.
ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ ಚನ್ನಬಸವನಗೌಡ ಹಾಗೂ ಗಿರೀಶ್ ಮಾತನಾಡಿದ ಅವರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಕಾಲೇಜು ನಿಯಮದಂತೆ ಶಿಸ್ತಿನಿಂದ ಇರಬೇಕೆಂದು ಹೇಳಿದರು. ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ, ನಮ್ಮ ಮೇಲೆ ಯಾರೂ ಒತ್ತಡ ಹೇರಿಲ್ಲ. ಶಿಸ್ತಿನ ವಿಚಾರದಲ್ಲಿ ಗಡ್ಡ ಟ್ರಿಮ್ ಮಾಡಲು ಹೇಳಿದ್ದರು. ಗಡ್ಡದ ವಿಚಾರ ಬಿಟ್ಟರೆ ಬೇರೆ ಏನೂ ಸಮಸ್ಯೆ ಆಗಿಲ್ಲ. ತಾರತಮ್ಯ ಮಾಡಿರುವ ಬಗ್ಗೆ ಯಾವುದೇ ವಿಚಾರ ಇಲ್ಲ. ಈಗ ಸಮಸ್ಯೆ ಬಗೆ ಹರಿದಿದೆ, ಏನೂ ಸಮಸ್ಯೆ ಇಲ್ಲ. ನಮ್ಮ ಸಂಪ್ರದಾಯ ಪಾಲನೆಗೆ ಅಡ್ಡಿ ಇಲ್ಲ ಎಂದು ತಿಳಿಸಿದರು.
ಇದನ್ನು ಓದಿ: ಗವಾಸ್ಕರ್ಗೆ ಎಮೋಜಿ ಮೂಲಕ ಟಾಂಟ್ ಕೊಟ್ಟ ರೋಹಿತ್ ಪತ್ನಿ!
ನೀವು ನರ್ಸಿಂಗ್ ವಿದ್ಯಾರ್ಥಿಗಳು ರೋಗಿಗಳ ಶುಶ್ರೂಷೆ ಮಾಡಬೇಕು. ರೋಗಿಗಳ ಬಳಿ ಹೋಗಬೇಕು ಅವರು ನಿಮ್ಮನ್ನು ನೋಡಿದ ಕೂಡಲೆ ಇವರು ಚಿಕಿತ್ಸೆ ಕೊಡುತ್ತಾರೆ ಎನ್ನುವ ಭಾವನೆ ಬರಬೇಕು. ಹೀಗಾಗಿ ಎಲ್ಲರೂ ಗಡ್ಡ ಟ್ರಿಂ ಮಾಡಿಕೊಂಡು ಶಿಸ್ತಾಗಿ ಬನ್ನಿ ಎಂದಿದ್ದರು. ಎಲ್ಲ ವಿದ್ಯಾರ್ಥಿಗಳಿಗೂ ಒಂದೇ ರೀತಿ ಸೂಚನೆ ಕೊಟ್ಟಿದ್ದರು. ಅದನ್ನು ಕೆಲವರು ತಪ್ಪಾಗಿ ಕೆಲವರು ಅರ್ಥೈಸಿಕೊಂಡಿದ್ದು ಸಮಸ್ಯೆ ಆಗಿದೆ. ನಾವು ಶಿಸ್ತು ಬರಬೇಕು, ಕಾಲೇಜಿನ ನಿಯಮಾವಳಿಗಳನ್ನು ಪಾಲಿಸಬೇಕಿರುವುದು ನಮ್ಮ ಕರ್ತವ್ಯ ಎಂದರು.