ತುಮಕೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಟ್ವಿಸ್ಟ್ ಕೊಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಾಥಮಿಕ ತನಿಖೆಯಲ್ಲಿ ಲವ್ ಜಿಹಾದ್ ಕಂಡುಬಂದಿಲ್ಲ. ಈಗ ಬಂದಿರುವ ಮಾಹಿತಿ ಪ್ರಕಾರ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಅಂತ ತಿಳಿದು ಬಂದಿದೆ. ಆದರೆ ಯಾವಾಗ ಆಕೆ ತನ್ನಿಂದ ದೂರವಾಗುತ್ತಿದ್ದಾಳೆ ಅಂತ ಗೊತ್ತಾಯ್ತೋ, ಆಗ ಯುವಕ ಆಕೆಯನ್ನ ಕೊಲೆ ಮಾಡಿದ್ದಾನೆ ಎಂದು ಪರಮೇಶ್ವರ್ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರು ಆರೋಪಕ್ಕೆ, ತಿರುಗೇಟು ಕೊಟ್ಟ ಪರಮೇಶ್ವರ್, ಪ್ರತಿಯೊಂದು ವಿಷಯಕ್ಕೆ ಸರ್ಕಾರವನ್ನು ದೂರುವುದು ಬಿಜೆಪಿ ನಾಯಕರಿಗೆ ಅಭ್ಯಾಸ, ಅದರಲ್ಲೂ ಈಗ ಚುನಾವಣಾ ಸಮಯ ಈ ರೀತಿಯ ಸೂಕ್ಷ್ಮ ವಿಷಯಗಳಲ್ಲಿ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿದ್ದಾರೆ, ಅವನ ವಿರುದ್ಧಾ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.