ದೆಹಲಿ : ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರೋ ರಾಹುಲ್ ಗಾಂಧಿ, ಈಗ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ದೆಹಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷ ನಿರ್ಧರಿಸಿದ್ರೆ ನಾನು ಅಮೇಥಿಯಿಂದಲೂ ಸ್ಪರ್ಧೆಗೆ ಸಿದ್ಧ ಅಂತ ಹೇಳಿದ್ದಾರೆ. ಕಳೆದ ಬಾರಿ ಅಮೇಥಿ ಮತ್ತು ವಯನಾಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು. ವಯನಾಡಿನಲ್ಲಿ ರಾಹುಲ್ ಗಾಂಧಿ ಗೆಲುವು ಕಂಡ ರಾಹುಲ್ ಗಾಂಧಿ, ಕಳೆದ ಬಾರಿ ರಾಹುಲ್ ಗಾಂಧಿಯವರು ಬಿಜೆಪಿಯ ಸ್ಮೃತಿ ಇರಾನಿ ಮುಂದೆ ಸೋತಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.