ಮೂರನೇ T20 ಪಂದ್ಯದಲ್ಲಿ ಟೀಂ ಇಂಡಿಯಾ 11 ರನ್ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 6 ವಿಕೆಟ್ಗೆ 219 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 20 ಓವರ್ಗಳಲ್ಲಿ 7 ವಿಕೆಟ್ಗೆ 208 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ 11 ರನ್ ಗಳ ಜಯ ಸಾಧಿಸಿತು. 4 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.
ದಕ್ಷಿಣ ಆಫ್ರಿಕಾ ಪರ ಮಾರ್ಕೊ ಜಾನ್ಸೆನ್ 17 ಎಸೆತಗಳಲ್ಲಿ 54 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್ ಹೊಡೆದರು. ಹೆನ್ರಿಕ್ ಕ್ಲಾಸೆನ್ 22 ಎಸೆತಗಳಲ್ಲಿ 41 ರನ್ ಕೊಡುಗೆ ನೀಡಿದರು. ದಕ್ಷಿಣ ಆಫ್ರಿಕಾ ಪರ ರಿಯಾನ್ ರಿಕಲ್ಟನ್ 15 ಎಸೆತಗಳಲ್ಲಿ 20, ರೀಜಾ ಹೆನ್ರಿಕ್ಸ್ 13 ಎಸೆತಗಳಲ್ಲಿ 21, ಏಡನ್ ಮಾರ್ಕ್ರಾಮ್ 18 ಎಸೆತಗಳಲ್ಲಿ 29, ಟ್ರಿಸ್ಟಾನ್ ಸ್ಟಬ್ಸ್ 12 ಎಸೆತಗಳಲ್ಲಿ 12 ರನ್ಗಳ ಕೊಡುಗೆ ನೀಡಿದರು.
ಇದನ್ನು ಓದಿ: ಚಾಂಪಿಯನ್ಸ್ ಟ್ರೋಫಿ ಕೈತಪ್ಪಿದರೆ ಪಾಕಿಸ್ತಾನಕ್ಕೆ 54,90,00,00,00 ನಷ್ಟ
ಅರ್ಷದೀಪ್ ಸಿಂಗ್ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಅರ್ಷದೀಪ್ ಸಿಂಗ್ 4 ಓವರ್ಗಳಲ್ಲಿ 37 ರನ್ ನೀಡಿ 3 ವಿಕೆಟ್ ಪಡೆದರು. ವರುಣ್ ಚಕ್ರವರ್ತಿಗೆ 2 ವಿಕೆಟ್ ಬಿದ್ದಿದೆ. ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದುಕೊಂಡರು. ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ 20 ಓವರ್ಗಳಲ್ಲಿ 6 ವಿಕೆಟ್ಗೆ 219 ರನ್ ಗಳಿಸಿತ್ತು. ತಿಲಕ್ ವರ್ಮಾ 56 ಎಸೆತಗಳಲ್ಲಿ 107 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಅವರು ತಮ್ಮ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್ಗಳನ್ನು ಹೊಡೆದರು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 25 ಎಸೆತಗಳಲ್ಲಿ 50 ರನ್ ಗಳಿಸಿದರು.