ಐಪಿಎಲ್ 2025 ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತಿದೆ. ಈ ಮಹತ್ವದ ಘಟನೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಬಲಪಡಿಸಲು ಆಟಗಾರರನ್ನು ಖರೀದಿಸಲು ಸಜ್ಜಾಗಿದ್ದಾರೆ.
ಐಪಿಎಲ್ನಲ್ಲಿ ಅತ್ಯಂತ ಕುತೂಹಲಕಾರಿ ಕ್ಷಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಇಷ್ಟು ದಿನ ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಕುತೂಹಲಕ್ಕೆ ಕಾರಣರಾಗಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಕೊನೆಗೂ ಹರಾಜಿನಲ್ಲಿ ಕಾಣಿಸಿಕೊಂಡಿದ್ದು, ಅವರನ್ನು ದಾಖಲೆಯ ಮೊತ್ತ ನೀಡಿ ಲಕ್ನೋ ಸೂಪರ್ಜೈಂಟ್ಸ್ ತಂಡ ಖರೀದಿಸುವಲ್ಲಿ ಯಶಸ್ವಿಯಾಗಿದೆ.
ಕೆ.ಎಲ್ ರಾಹುಲ್ರನ್ನು ತಂಡದಿಂದ ಕೈಬಿಟ್ಟು ಸಖತ್ ಸುದ್ದಿಯಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ, ರಿಷಬ್ ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂಪಾಯಿ ಬೃಹತ್ ಮೊತ್ತವನ್ನು ಪಾವತಿಸಿ ತಂಡಕ್ಕೆ ಸೇರಿಸಿಕೊಮಡಿದೆ. ಈ ಮೂಲಕ ರಿಷಬ್ ಪಂತ್, ಕೆಲವೇ ಕ್ಷಣಗಳಲ್ಲಿ ಐಪಿಎಲ್ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಅವರ ದಾಖಲೆಯನ್ನು ಮುರಿದಿದ್ದಾರೆ.