ಸನ್ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಸೀಸನ್ 17ರ ಫೈನಲ್ಗೆ ಪ್ರವೇಶಿಸಿದೆ. ಚೆನ್ನೈ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಜಯ ಸಾಧಿಸಿ ಎಸ್ಆರ್ಹೆಚ್ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಅತ್ತ ಎಸ್ಆರ್ಹೆಚ್ ಗೆಲ್ಲುತ್ತಿದ್ದಂತೆ ತಂಡದ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು.
ಐಪಿಎಲ್ ಮ್ಯಾಚ್ನಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬೌಲಿಂಗ್ ಮಾಡಿತ್ತು. ಅದರಂತೆ ಇನಿಂಗ್ಸ್ ಆರಂಭಿಸಿದ ಎಸ್ಆರ್ಹೆಚ್ ತಂಡ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದು, ಸನ್ರೈಸರ್ಸ್ ಹೈದರಾಬಾದ್ ತಂಡವು ಒಂದು ಹಂತದಲ್ಲಿ 160 ರನ್ಗಳ ಗಡಿ ದಾಟುವುದು ಕಷ್ಟಕರವಾಗಿತ್ತು. ಇದೇ ವೇಳೆ ಸ್ಟೇಡಿಯಂನಲ್ಲಿ ಕಾವ್ಯ ಮಾರನ್ ಹತಾಶಭಾವದೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಹೆನ್ರಿಕ್ ಕ್ಲಾಸೆನ್ (50) ಬಾರಿಸಿದ ಅರ್ಧಶತಕದ ನೆರವಿನಿಂದ ಎಸ್ಆರ್ಹೆಚ್ ತಂಡವು ನಿಗದಿತ 20 ಓವರ್ಗಳಲ್ಲಿ 175 ರನ್ ಕಲೆಹಾಕಿತ್ತು.
ಆದರೆ ಪಂದ್ಯದಲ್ಲಿ ಯಾವಾಗ ಶಹಬಾಝ್ ಅಹ್ಮದ್ ಹಾಗೂ ಅಭಿಷೇಕ್ ಶರ್ಮಾ ದಾಳಿಗಿಳಿದರೂ ಇಡೀ ಪಂದ್ಯದ ಚಿತ್ರಣ ಬದಲಾಯ್ತು. ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ಶಹಬಾಝ್ ಕೇವಲ 23 ರನ್ ನೀಡಿ 3 ವಿಕೆಟ್ ಕಬಳಿಸಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಅಭಿಷೇಕ್ ಶರ್ಮಾ 24 ರನ್ ನೀಡಿ 2 ವಿಕೆಟ್ ಪಡೆದರು.