ಮೈಸೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರ ಮಾಡುತ್ತಿರುವ ವೇಳೆ ಸಚಿವ ಜಮೀರ್ ಅಹ್ಮದ್ ಹೆಚ್ಡಿ ಕುಮಾರಸ್ವಾಮಿ ಅವರನ್ನು “ಕರಿಯ ಕುಮಾರಸ್ವಾಮಿ” ಅಂತ ಸಂಬೋಧಿಸಿದ್ದರು. ಇದರಿಂದ ಜೆಡಿಎಸ್ ಕಾರ್ಯಕರ್ತರು, ನಾಯಕರು ಆಕ್ರೋಶಗೊಂಡಿದ್ದರು. ಇದೀಗ ಜಮೀರ್ ಅಹ್ಮದ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ತಮ್ಮ ಹೇಳಿಕೆ ಬಹಳಷ್ಟು ವಿವಾದ ಸೃಷ್ಟಿಯಾಗ್ತಿದ್ದಂತೆ ಕ್ಷಮೆ ಕೋರಿದರು.
ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. 24 ಗಂಟೆಯಲ್ಲಿ 14 ಗಂಟೆ ಜೊತೆಯಲ್ಲಿ ಇರ್ತಾ ಇದ್ದೊ. ಅವರು ನನ್ನ ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆ ಅದನ್ನು ದೊಡ್ಡ ವಿಚಾರ ಮಾಡ್ತಾ ಇದ್ದಾರೆ. ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ಪ್ರೀತಿಯಿಂದ ಅವರು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಾ ಇದ್ದೆ. ನನ್ನ ಮಾತಿಂದ ಯಾರಿಗಾದ್ರು ನಾವಾಗಿದ್ರೆ ನಾನು ಕ್ಷಮೆ ಕೇಳ್ತೀನಿ. ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಪರಿಮಾಣ ಬೀರಲ್ಲ ಎಂದು ತಿಳಿಸಿದರು.
ಇದನ್ನು ಓದಿ : ಟೀಂ ಇಂಡಿಯಾವನ್ನು ಕಾಡುತ್ತಿದೆ ರೋ-ಕೋ ವೈಫಲ್ಯ : ಶತಕದ ಜೊತೆಯಾಟ ಬಂದು ಯಾವ ಕಾಲವಾಯ್ತು..?
ದೇವೇಗೌಡರ ಕುಟುಂಬ ಕೊಂಡುಕೊಳ್ಳುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರಾದರೂ ದೇವೇಗೌಡರ ಕುಟುಂಬ ಕೊಂದುಕೊಳ್ಳಲು ಸಾಧ್ಯವಾ? ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಮುಸ್ಲಿಂ ಮತಗಳು ಬೇಡ ಎಂದಿದ್ದರು. ಈಗ ದುಡ್ಡು ಕೊಟ್ಟು ಖರೀದಿಸಲು ಮುಂದಾಗಿದ್ದಾರೆ. ಅದನ್ನು ಉಲ್ಲೇಖಸಿ ನಾನು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.