ಸಕ್ಕರೆ ನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ ಶಿಕಾರಿ ನಡಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ನಾವು ಅಧಿಕಾರಕ್ಕೆ ಬಂದರೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ಸೇರಿಸಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂ. ನೀಡುತ್ತೇವೆ ಎಂದು ಹೇಳಿದ್ದಾರೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಚುನಾವಣಾ ಬಾಂಡ್ ಕಾನೂನುಬಾಹಿರವೆಂದು ಸುಪ್ರೀಂಕೋರ್ಟ್ ಹೇಳಿದೆ. ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಲಾಗಿದೆ. ಇದು ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ನ್ನು ಬಿ ಟೀಮ್ ಎಂದು ಹೇಳಿದ್ದೆ. ಆದರೆ ಈಗ ಜೆಡಿಎಸ್, ಬಿಜೆಪಿ ಇಬ್ಬರೂ ಪಾರ್ಟನರ್ ಆಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.