ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ.
GTTC ಕ್ಯಾಂಪಸ್‌ನಲ್ಲಿ NIELIT ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ನೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ (MoU) ಬುಧವಾರ, ಸಹಿ ಹಾಕಲಾಯಿತು.
ಈ ಸಹಯೋಗವು ವಿದ್ಯಾರ್ಥಿಗಳಿಗೆ ವಿಶೇಷವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಚಿನಲ್ಲಿರುವ ಸಮುದಾಯಗಳವರಿಗೆ ಕೃತಕ ಬುದ್ಧಿಮತ್ತೆ (AI), ಇಂಟರ್ನೆಟ್ ಆಫ್ ಥಿಂಗ್ಸ್ (IoT), ಡೇಟಾ ವಿಶ್ಲೇಷಣೆ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಅತ್ಯಾಧುನಿಕ ತರಬೇತಿ ಒದಗಿಸಲು ನೆರವಾಗಲಿದೆ.
ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ GTTC ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ದಿನೇಶ್ ಕುಮಾರ್ ಮತ್ತು NIELIT ನಿರ್ದೇಶಕ ಎಸ್. ಪ್ರತಾಪ್ ಕುಮಾರ್ ಒಪ್ಪಂದವನ್ನು ವಿನಿಮಯ ಮಾಡಿಕೊಂಡರು.
“ಈ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್, ಐಟಿ-ಐಟಿಇಎಸ್ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಲಪಡಿಸಲು ಪ್ರಮುಖ ಉಪಕ್ರಮವಾಗಿದೆ. ಎರಡೂ ಸಂಸ್ಥೆಗಳ ಬಲವನ್ನು ಬಳಸಿಕೊಳ್ಳುವ ಮೂಲಕ, ನಾವು ಪರಿಣಾಮಕಾರಿ ಅಲ್ಪಾವಧಿಯ ಕೌಶಲ್ಯ ಕಾರ್ಯಕ್ರಮಗಳನ್ನು ನೀಡುವ ಗುರಿಯನ್ನು ಹೊಂದಿದ್ದೇವೆ” ಎಂದು ಸಚಿವ ಡಾ. ಪಾಟೀಲ್ ಹೇಳಿದರು.
ಈ ಉಪಕ್ರಮವು ಕೌಶಲ್ಯ ಅಂತರವನ್ನು ಕಡಿಮೆ ಮಾಡುತ್ತದೆ, ಉದ್ಯಮ-ಸಂಬಂಧಿತ ತರಬೇತಿಯ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಮತ್ತು ಉದ್ಯೋಗ-ಸಿದ್ಧ ಕಾರ್ಯಪಡೆಯನ್ನು ಖಚಿತಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ದಿನೇಶ್ ಕುಮಾರ್ ಮಾತನಾಡಿ ಯೋಜನೆಯ ಬಗ್ಗೆ ಇನ್ನಷ್ಟು ವಿವರಿಸಿದರು. ವಿದ್ಯಾರ್ಥಿಗಳನ್ನು ನೈಜ-ಪ್ರಪಂಚದ ಉದ್ಯಮ ಪಾತ್ರಗಳಿಗೆ ಸಿದ್ಧರಾಗುತ್ತಾರೆ. ಈ ಉಪಕ್ರಮವು ಎಲ್ಲ ಸಮುದಾಯಗಳನ್ನು ಸಬಲಗೊಳಿಸುತ್ತದೆ, ಗ್ರಾಮೀಣ ಯುವಕರು, ಮಹಿಳೆಯರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಹೊಸ ಅವಕಾಶಗಳನ್ನು ನೀಡುತ್ತದೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುತ್ತದೆ” ಎಂದು ಹೇಳಿದರು.
ಈ ಸಹಯೋಗದೊಂದಿಗೆ, GTTC ಭವಿಷ್ಯಕ್ಕೆ ಸಿದ್ಧವಾಗಿರುವ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ, ಇಂದಿನ ತಂತ್ರಜ್ಞಾನ-ಚಾಲಿತ ಉದ್ಯೋಗ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅಗತ್ಯವಾದ ಪರಿಣತಿಯನ್ನು ಹೊಂದಲು ಅವಕಾಶ ಕಲ್ಪಿಸಿದೆ.