ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದಲ್ಲಿ ಎಸ್ಡಿಪಿಐ ಕೈವಾಡ ಇದೆ ಎಂಬುದನ್ನು ರಾಷ್ಟ್ರೀಯ ತನಿಖಾ ದಳ ಬಯಲಿಗೆಳೆದಿದೆ. ಎಸ್ಡಿಪಿಐ ಸಹಕಾರ ಪಡೆದು ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯ ಹುಕ್ಕೇರಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಈ ದೇಶಕ್ಕೆ ಅಂಟಿದ್ದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿದರು. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಸ್ಡಿಪಿಐಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ. ಎಸ್ಡಿಪಿಐ ಸಹಕಾರ ಪಡೆದು ಚುನಾವಣೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.