ಸ್ಯಾಂಡಲ್ವುಡ್ ನಿರ್ದೇಶಕ ಹಾಗೂ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ಗುರುವಾರ ಮೃತಪಟ್ಟಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೀಪಕ್ ಅವರಿಗೆ 42 ವರ್ಷ. ಇವರು ಸಂಜೆ 7 ಗಂಟೆ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದೀಪಕ್ ಅವರು ಕನ್ನಡದಲ್ಲಿ ಮನಸಾಲಜಿ, ಶುಗರ್ ಫ್ಯಾಕ್ಟರಿ ಎಂಬ ಎರಡಸು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಸಿನಿಮಾ ನಿರ್ದೇಶನದ ಜತೆಗೆ ಟೂರಿಸಂ ವ್ಯವಹಾರವನ್ನೂ ನಡೆಸುತ್ತಿದ್ದರು