ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾನುವಾರ 13 ರೈಲುಗಳು ಹಾಗೂ ಸೋಮವಾರ 4 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಜು.28ರ ಭಾನುವಾರ ಮಂಗಳೂರು ಜಂಕ್ಷನ್ – ಯಶವಂತಪುರ, ವಿಜಯಪುರ-ಮಂಗಳೂರು ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು – ಕಾರವಾರ, ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ, ಯಶವಂತಪುರ -ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ – ಯಶವಂತಪುರ, ಮಂಗಳೂರು ಸೆಂಟ್ರಲ್ -ವಿಜಯಪುರ, ಕಾರವಾರ-ಕೆಎಸ್ಆರ್ ಬೆಂಗಳೂರು, ಕೆಎಸ್ಆರ್ ಬೆಂಗಳೂರು- ಕಣ್ಣೂರು, ಕೆಎಸ್ಆರ್ ಬೆಂಗಳೂರು-ಕಾರವಾರ, ಕಣ್ಣೂರು-ಕೆಎಸ್ಆರ್ ಬೆಂಗಳೂರು ರೈಲುಗಳನ್ನು ರದ್ದುಗೊಳಿಸಲಾಗಿದೆ.
ಜು.29ರ ಸೋಮವಾರ ಕಣ್ಣೂರು- ಕೆಎಸ್ಆರ್ ಬೆಂಗಳೂರು, ಕಾರವಾರ- ಕೆಎಸ್ಆರ್ ಬೆಂಗಳೂರು, ಮುರ್ಡೇಶ್ವರ- ಎಸ್ಎಂವಿಟಿ ಬೆಂಗಳೂರು, ಮಂಗಳೂರು- ವಿಜಯಪುರ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರ ಇದೇ ಮಾರ್ಗದಲ್ಲಿ ಸಂಚರಿಸಬೇಕಾದ ಏಳು ರೈಲುಗಳ ಸಂಚಾರ ರದ್ದಾಗಿ ಪ್ರಯಾಣಿಕರಿಗೆ ತೊಂದರೆಯಾಯಿತು. ಮೂರು ರೈಲುಗಳು ಮಾರ್ಗ ಬದಲಿಸಿ ಸಂಚಾರಮಾಡಿವೆ.