- 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊಣ್ಣೂರು
- ರಾಜ್ಯದಲ್ಲಿ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ
ಅಂಕಿತಾ ಕೊಣ್ಣೂರುಗೆ ತುಂಬುಹೃದಯದ ಅಭಿನಂದನೆಗಳು ಎಂದು ಫೆಸ್ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಅಂಕಿತಾ ಕೊಣ್ಣೂರು ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. ಅಂಕಿತಾಳ ಶೈಕ್ಷಣಿಕ ಬದುಕು ಮುಂದೆಯೂ ಸಾಧನೆಗಳಿಂದ ಕೂಡಿರಲಿ, ಈಕೆ ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.