- 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ.
- ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ.
- ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಬಾಲಕಿಯರದ್ದೇ ಮೈಲುಗೈಯಾಗಿದೆ .
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಫಲಿತಾಂಶದ ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆ ಮೊದಲ ಸ್ಥಾಮ ದೊರೆತಿದ್ದರೆ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.