ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ಆಡಳಿತ ವರ್ಗದಲ್ಲಿ ಭಾರಿ ಬದಲಾವಣೆ ಮಾಡುತ್ತಿದೆ. ಇತ್ತೀಚಿಗೆ, ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ, ಕರ್ನಾಟಕ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ನೂತನ ಜಾಗಗಳಿಗೆ ಕೂಡಲೇ ರಿಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್ ಕುಮಾರ್ ಎಸ್ ನಿರ್ದೇಶಿಸಿದ್ದಾರೆ.