ರಾಜ್ಯಾದ್ಯಂತ ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ 35 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥಪಡಿಸಿ, ಒಟ್ಟು 2,402 ಕೋಟಿ ರುಪಾಯಿ ಪರಿಹಾರ ಕೊಡಿಸಲಾಗಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿವಾರ್ಹಕ ಅಧ್ಯಕ್ಷ, ಹೈಕೋರ್ಟ್ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 14ರಂದು ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯ ಹೈಕೋರ್ಟ್ನ ಮೂರು ಪೀಠಗಳು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 1008 ಪೀಠಗಳು ಲೋಕ ಅದಾಲತ್ ನಡೆಸಿವೆ. ನ್ಯಾಯಾಲಯದಲ್ಲಿ ಬಾಕಿಯಿದ್ದ 2,00,083 ಮತ್ತು ವ್ಯಾಜ್ಯ ಪೂರ್ವ 33,84,347 ಪ್ರಕರಣ ಸೇರಿದಂತೆ ಒಟ್ಟ 35,84,430 ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ.