ಟೋಕಿಯೊ: ಜಪಾನ್ನಲ್ಲಿ ಸೋಮವಾರ 6.9 ತೀವ್ರತೆಯ ಭೂಕಂಪ ಸಂಭವಿಸಿದೆ. ಜಪಾನ್ನ ಹವಾಮಾನ ಇಲಾಖೆ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ.
ಕ್ಯುಶು ಪ್ರದೇಶದ ಮಿಯಾಝಾಕಿ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ಒಂದು ಮೀಟರ್ ವರೆಗಿನ ಸುನಾಮಿ ಅಲೆಗಳು ಏಳಬಹುದು ಎಂದು ಮುನ್ಸೂಚನೆ ನೀಡಿದೆ. ಸುನಾಮಿ ಪದೇ ಪದೇ ಅಪ್ಪಳಿಸಬಹುದು. ದಯವಿಟ್ಟು ಸಮುದ್ರಕ್ಕೆ ಇಳಿಯ ಬೇಡಿ. ಹಾಗೂ ಕರಾವಳಿ ಪ್ರದೇಶಗಳ ಬಳಿ ಹೋಗಬೇಡಿ ಎಂದು ಜೆಎಂಎ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಭೂಕಂಪದ ಸಂಪೂರ್ಣ ಪರಿಣಾಮದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಭೂಕಂಪದ ಬಗ್ಗೆ ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯೂ ವರದಿ ಮಾಡಿದೆ. ಅಲ್ಲದೇ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ.