ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ,(ಇಬ್ಬರು ಮಹಿಳೆಯರು ಎರಡು ಹೆಣ್ಣು ಮಕ್ಕಳು ಒಬ್ಬ ಯುವಕ, ಮತ್ತೊರ್ವ ವ್ಯಕ್ತಿ) ಸಾವನ್ನಪ್ಪಿದ್ದಾರೆ. ವೀಕೆಂಡ್ ಪ್ರವಾಸ ಕೈಗೊಂಡಿದ್ದ ಕುಟುಂಬ ಮಸಣ ಸೇರಿದೆ.
ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 10 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಅಪಘಾತದ ವೇಳೆ ಕಂಟೇನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿತ್ತು. ಇದರಿಂದ ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು. ಹೆವಿ ಲೋಡ್ ಇರುವ ಕಂಟೇನರ್ ಮೇಲೆತ್ತಲು ಲಾರಿ ಬೆಲ್ಟ್, ಚೈನ್ಗಳನ್ನ ತರಿಸಲಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಮೂರು ಕ್ರೇನ್ಗಳ ಸಹಾಯದಿಂದ ಕಂಟೇನರ್ ಮೇಲೆತ್ತಿ ಕಾರನ್ನು ಹೊರತೆಗೆದರು.
ಇನ್ನು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ವೀಕೆಂಡ್ ಪ್ರವಾಸಕ್ಕೆ ಹೊರಟಿದ್ದ ಕುಟುಂಬ 6 ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತು ಎಂದು ತಿಳಿದುಬಂದಿದೆ.