ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅದ್ದೂರಿಯಾಗಿ ತೆರೆ ಬಿದ್ದಿದೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಸಾಪ ತೆಗೆದುಕೊಂಡ ನಿರ್ಣಾಯಗಳು:
- ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆಗೆ ಒತ್ತಾಯ
- ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
- ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್ಗಳನ್ನು ಸರ್ಕಾರ ಎದುರಿಸಬೇಕು.
- ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
- ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಿಬೇಕು.
- 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಗಣ್ಯರಿಗೆ ಅಭಿನಂದನೆಗೆ ಮಂಡನೆ.
Continue Reading