ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.
ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತ್ಮಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ ಪೊಲೀಸ್ ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು. ಸಮಾಜದಲ್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯ ಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು. ಮಹಾತ್ಮಗಾಂಧಿ ಅವರ ಮಾತು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ್ಮ ಕೆಳಗಿನಅಧಿಕಾರಿಗಳು ಇನ್ನಷ್ಡು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹೀಗಾಗಿ ಬೀಟ್ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟ್ರೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸಿಎಂ ಸೂಚನೆ ನೀಡಿದರು.
ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು. ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು. ಜನರಿಗೆ ಪೊಲೀಸ್ ಬಳಿ ಹೋದರೆ ನ್ಯಾಯ ಸಿಗುತ್ತದೆ ಎನ್ನುವ ಆತ್ಮ ವಿಶ್ವಾಸ ಹೆಚ್ಚಾಗಬೇಕು.
ಶಾಂತಿ ಸಭೆಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿಯಮಿತವಾಗಿ ನಡೆಸಲೇಬೇಕು. ಜನರಿಗೆ ಪೊಲೀಸ್ ಬಳಿ ಹೋದರೆ ನ್ಯಾಯ ಸಿಗುತ್ತದೆ ಎನ್ನುವ ಆತ್ಮ ವಿಶ್ವಾಸ ಹೆಚ್ಚಾಗಬೇಕು. ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್ ಫರ್ ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರಿಗೆ, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ.
ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸರ್ಕಾರ ಸಹಿಸಲ್ಲ. ಜನರ ನಡುವೆ ಪೊಲೀಸರು, ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಚ್ಚೆಚ್ಚು ಕಾಣಿಸಬೇಕು. ಇದು ಜನ ಸಾಮಾನ್ಯರಿಗೆ ಧೈರ್ಯ ತಂದುಕೊಡುತ್ತದೆ. ಪೊಲೀಸರು ಹೆಚ್ಚೆಚ್ಚು ಜನಸಂಪರ್ಕ ಸಭೆಗಳನ್ನು ಹೆಚ್ಚೆಚ್ಚು ಪರಿಣಾಮಕಾರಿಯಾಗಿ ನಡೆಸಬೇಕು.DG-IGP ಯಿಂದ SP ಗಳವರೆಗೂ ಪ್ರತಿಯೊಬ್ಬರೂ ಠಾಣೆಗಳಿಗೆ ಭೇಟಿ ನೀಡಿ ಸರಿಯಾದ ಕ್ರಮದಲ್ಲಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸಿಎಂ ಹೇಳಿದರು.
ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಅವರುಗಳು ಉಪಸ್ಥಿತರಿದ್ದರು.