ಮಕ್ಕಳ ವಿಚಾರವಾಗಿ ಶುರುವಾದ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡುಗೋಲಿನಿಂದ ಹೆಂಡತಿ ಮೇಲೆ ಹಲ್ಲೆ ಮಾಡಿ ಪಾಪಿ ಪತಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದ ನಿವಾಸಿಯಾದ ಗೋಪಾಲ ನಾಯಕ ಎಂಬಾತ ಮಕ್ಕಳ ವಿಚಾರವಾಗಿ ಹೆಂಡತಿಯೊಡನೆ ಜಗಳ ಪ್ರಾರಂಭವಾಗಿದೆ. ಗಲಾಟೆ ತಾರಕಕ್ಕೇರಿದ್ದು ಮಾತಿಗೆ ಮಾತು ಬೆಳದಿದ್ದರಿಂದ ಗಂಡನ ದರ್ಪ ಜೋರಾಗಿದೆ. ಹೀಗಾಗಿ ಮನೆಯಲ್ಲಿದ್ದ ಕುಡುಗೋಲಿನಿಂದ ಹೆಂಡತಿಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಹೆಂಡತಿ ಮೃತಪಟ್ಟಿದ್ದಾಳೆ. ಹೀಗಾಗಿ ಮನೆಯಲ್ಲಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಚಾರ ತಿಳಿದ ಪೋಲಿಸರು ಸ್ಥಳಕ್ಕೆ ಬೇಟಿಮಾಡಿ ಪರಿಶೀಲನೆ ನಡೆಸಿದ್ದಾರೆ.