ಬಿಹಾರದಲ್ಲಿ ಕಳೆದ 15 ದಿನಗಳಲ್ಲಿ ಸಂಭವಿಸಿದ 10 ಸೇತುವೆ ದುರಂತದ ಬೆನ್ನಲ್ಲೇ ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್ ಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಹಾರ ಅಭಿವೃದ್ಧಿ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಈ ಕುರಿತು ಮಾತನಾಡಿ, ರಾಜ್ಯ ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಸೇತುವೆ ಹೊಣೆಗಾರಿಕೆ ಹೊತ್ತಿರುವ ಗುತ್ತಿಗೆದಾರರನ್ನು ಪತ್ತೆಹಚ್ಚಲಾಗುವುದು ಎಂದಿದ್ದಾರೆ. ರಾಜ್ಯದಲ್ಲಿ ಗುರುವಾರ ಸಾರಣ್ ಜಿಲ್ಲೆಯಲ್ಲಿ ಸೇತುವೆ ಕುಸಿತಗೊಂಡಿತ್ತು. ಇದು ಕಳೆದ 15 ದಿನಗಳಲ್ಲಿ ಸಂಭವಿಸಿದ 10ನೇ ದುರಂತವಾಗಿತ್ತು.