ಕಳೆದ ಮೇ 26 ರಂದು ರಾತ್ರಿ ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆಯಾಗಿತ್ತು. ಧ್ರುವಾ ಸರ್ಜಾ ಅವರ ಮನೆಯಿಂದ ತೆರಳುತ್ತಿದ್ದ ವೇಳೆ ಹಲ್ಲೆ ನಡೆದಿತ್ತು. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಸ್ವತಃ ಧ್ರುವ ಸರ್ಜಾ ಅವರೇ ದಕ್ಷಿಣ ವಿಭಾಗದ ಡಿಸಿಪಿಗೆ ಕರೆ ಮಾಡಿ, ತಪ್ಪಿತಸ್ಥರ ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು.
ತನಿಖೆಗೆ ಇಳಿದ ಬನಶಂಕರಿ ಪೊಲೀಸರಿಗೆ ಈಗ ಅಸಲಿ ಸತ್ಯ ಗೊತ್ತಾಗಿದೆ. ಧ್ರುವ ಬಳಿ ಕೆಲಸ ಮಾಡಿಕೊಂಡಿರುವ ನಾಗೇಂದ್ರ ಎಂಬ ಆರೋಪ ಕೇಳಿ ಬಂದಿದೆ. ಆರೋಪಿ ನಾಗೇಂದ್ರ ಧ್ರುವ ಸರ್ಜಾ ಅವರಿಗೆ ಕಾರು ಚಾಲಕನಾಗಿ ಕೆಲಸ ಮಾಡ್ತಿದ್ದಾನೆ ಎನ್ನಲಾಗಿದೆ.
ಪ್ರಶಾಂತ್ ಪೂಜಾರಿ ಇತ್ತೀಚೆಗೆ ಧ್ರುವ ಸರ್ಜಾಗೆ ತುಂಬಾ ಆಪ್ತರಾಗಿದ್ದರು. ಇದು ನಾಗೇಂದ್ರನಿಗೆ ಸಹಿಸಿಕೊಳ್ಳಲು ಆಗ್ತಿರಲಿಲ್ಲ. ತಾನು ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದಾನೆ ಎಂಬ ಆರೋಪ ಕೇಳಿ ಬರ್ತಾಇದೆ. ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದು ನಾಗೇಂದ್ರ ಅವರ ಸ್ನೇಹಿತರಾದ ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಎಂಬುದು ತಿಳಿದು ಬಂದಿದೆ. ತಮ್ಮೂರಿನ ಹುಡುಗರನ್ನು ಬಿಟ್ಟು ಹಲ್ಲೆ ಮಾಡಿಸಿರುವ ಆರೋಪ ನಾಗೇಂದ್ರ ವಿರುದ್ಧ ಕೇಳಿಬಂದಿದೆ. ಸದ್ಯ ಈ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.