ಜು.12 ರಂದು ನಡೆಯಲಿರುವ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹ ಸಮಾರಂಭದಲ್ಲಿ ಸಂಗೀತ ಸುಧೆ ಹರಿಸಲು ಪ್ರಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ ಮುಂಬೈಗೆ ಆಗಮಿಸಿದ್ದಾರೆ. ಮದುವೆಯ ಸಂಗೀತ್ ಸಮಾರಂಭದಲ್ಲಿ ಪ್ರದರ್ಶನ ನೀಡಲು ಜಸ್ಟಿನ್ ಬರೋಬ್ಬರಿ 83 ಕೋಟಿ ರುಪಾಯಿ ಸಂಭಾವನೆ ಪಡೆದಿದ್ದಾರೆ. ಜಸ್ಟಿನ್ ಅವರು 2017ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿದ್ದರು.