ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ 296 ಪುಟಗಳ ದೂರು ಸಲ್ಲಿಕೆಯಾಗಿದೆ. 100 ಕೋಟಿಗೂ ಅಧಿಕ ನಷ್ಟ ಆಗಿದೆ, CBI ತನಿಖೆ ನಡೆಸಿ ಎಂದು ವಕೀಲ ರವಿಕುಮಾರ್ ಎಂಬುವವರು ಪ್ರಧಾನಿ ಮೋದಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರ ಮೇಲೊಂದು ಅಕ್ರಮಗಳು ಬಯಲಾಗುತ್ತಲೇ ಇವೆ. ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.