- ದೇಶದಲ್ಲಿ ಕೋಲಾಹಲ ಎಬ್ಬಿಸಿದ್ದ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ಗೆ ಟ್ವಿಸ್ಟ್
- ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಲು ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ದೇಶದಲ್ಲಿ ಕೋಲಾಹಲ ಎಬ್ಬಿಸಿದ್ದ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಮಹಿಳಾ ಕುಸ್ತಿಪಟುಗಳಿಗೆ ನೀಡಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಮಹಿಳೆಯರ ಘನತೆಗೆ ಧಕ್ಕೆ ತಂದ ಅಪರಾಧವನ್ನು ಬಿಜೆಪಿ ನಾಯಕನ ಮೇಲೆ ಹೊರಿಸಲಾಗಿದ್ದು, ಎಲ್ಲಾ ಆರೋಪಗಳ ಮೇಲೆ ಕೇಸ್ ದಾಖಲಿಸುವಂತೆ ಹೇಳಿದೆ.
2023ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳು ಎರಡು ಬಾರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಜೂನ್ 15 ರಂದು ಬ್ರಿಜ್ ಭೂಷಣ್ ಶರಣ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354(ಎ), 354 (ಡಿ) ಅಡಿಯಲ್ಲಿ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಈ ಗಂಭೀರ ಆರೋಪಗಳ ನಡುವೆ ಬ್ರಿಜ್ ಭೂಷಣ್ ಅವರಿಗೆ ಕೈಸರ್ಗಂಜ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಆದರೆ ಬಿಜೆಪಿ ಪರಿಷ್ಠರು ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಉಮೇದುವಾರಿಕೆಗೆ ಅವಕಾಶ ನೀಡಿದೆ.