ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಇಂದ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರಿಗೆ ಶುಕ್ರವಾರ (ಅ18) ಜಾಮೀನು ನೀಡಿದೆ ದೆಹಲಿಯ ಕೋರ್ಟ್. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜೈಲುವಾಸ ಅನುಭವಿಸುತ್ತಿದ್ದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ 50,000 ವೈಯಕ್ತಿಕ ಬಾಂಡ್ ಪಡೆದು ಷರತ್ತುಬದ್ದ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳು ಅಥವಾ ವ್ಯಕ್ತಿಗಳನ್ನು ಸಂಪರ್ಕಿಸುವುದನ್ನು ನಿಷೇಧಿಸಿದೆ ಮತ್ತು ಯಾವುದೇ ರೀತಿಯಲ್ಲಿ ವಿಚಾರಣೆಯ ಮೇಲೆ ಪ್ರಭಾವ ಬೀರದಂತೆ ನಿರ್ಬಂಧ ವಿಧಿಸಿದೆ.