ನಾಳೆ ನಡೆಯುವ 17ನೇ ಆವೃತ್ತಿಯ ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ಮತ್ತು ಆರ್ಸಿಬಿ ಸೆಣಸಾಟ ನಡೆಯಲಿವೆ. ಈ ಎರಡು ತಂಡದ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದ್ರೆ ಈ ಮೈದಾನದಲ್ಲಿ ನಡೆಯಬೇಕಿದ್ದ ಲೀಗ್ ಪಂದ್ಯವೊಂದು ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಈ ಪಂದ್ಯಕ್ಕೂ ವರುಣನ ಕಾಟ ಇದೆ ಎಂಬ ಚಿಂತೆ ಕ್ರಿಕೆಟ್ ಅಭಿಮಾನಿಗಳನ್ನು ಕಾಡ್ತಿದೆ. ಆದರೆ ಹವಾಮಾನ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ , ಅಹಮದಾಬಾದ್ನಲ್ಲಿ ಮೇ 22 ರಂದು ತಾಪಮಾನವು 45 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಬಹುದು. ಆದರೆ ಮಾಳೆಯಾಗುವ ಸಾಧ್ಯತೆ ಬಹಳ ಕಡಿಮೆ ಇದೆ ಎಂದು ತಿಳಿಸಿದೆ. ಹೀಗಾಗಿ ಪಂದ್ಯವನ್ನು ಕ್ರಿಕೆಟ್ ಅಭಿಮಾಗಳು ವೀಕ್ಷಿಸಿಬಹುದು. ರಾತ್ರಿ 8 ಗಂಟೆಗೆ ತಾಪಮಾನವು 42 ಡಿಗ್ರಿ ಸೆಲ್ಸಿಯಸ್ಗೆ ಮತ್ತು ರಾತ್ರಿ 10 ಗಂಟೆಗೆ 39 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ನಿರೀಕ್ಷೆ ಇದೆ.