ತೆಲುಗು ನಟ ಅಲ್ಲು ಅರ್ಜುನ್ ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪುಷ್ಪ ಸಿನಿಮಾದಿಂದಲೇ ವಿವಾದಗಳನ್ನ ಮೈಮೇಲೆ ಎಳೆದುಕೊಂಡಿದ್ದಾರೆ ಅಲ್ಲು ಅರ್ಜುನ್. ಬಂಧನದ ಪ್ರಹಸನದ ಬಳಿಕ ಅಲ್ಲು ಅರ್ಜುನ್ ಗೆ ಮತ್ತೊಂದು ಆಘಾತ ಎದುರಾಗಿದೆ. ಹೌದು.. ಅಲ್ಲು ಅರ್ಜುನ್ ಗೆ ನೀಡಿದ್ದ ರಾಷ್ಟ್ರೀಯ ಪ್ರಶಸ್ತಿ ವಾಪಸ್ ಪಡೆಯುತ್ತಾ ಕೇಂದ್ರ ಸರ್ಕಾರ ಎಂಬ ಚರ್ಚೆ ನಡೆಯುತ್ತಿದೆ.
ನಟ ಅಲ್ಲು ಅರ್ಜುನ್ ಗೆ ಪುಷ್ಪ ಸಿನಿಮಾಗಾಗಿ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿತ್ತು. ಅಲ್ಲು ಅರ್ಜುನ್ ಬಂಧನದ ಬಳಿಕ ರಾಷ್ಟ್ರೀಯ ಪ್ರಶಸ್ತಿ ವಾಪಸ್ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿಂದೆ ಡ್ಯಾನ್ಸ್ ಕೊರಿಯೊಗ್ರಾಫರ್ ಜಾನಿ ಮಾಸ್ಟರ್ ರಿಂದ ರಾಷ್ಟ್ರೀಯ ಪ್ರಶಸ್ತಿ ವಾಪಸ್ ಪಡೆದಿತ್ತು ಕೇಂದ್ರ ಸರ್ಕಾರ. ಏಕೆಂದರೆ ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಬಂಧನವಾಗಿತ್ತು.
ಈಗ ಮಹಿಳೆ ಸಾವಿನ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಹೀಗಾಗಿ ಅಲ್ಲು ಅರ್ಜುನ್ ಗೆ ನೀಡಿರೋ ಪ್ರಶಸ್ತಿ ವಾಪಸ್ ಬಗ್ಗೆ ಟಾಲಿವುಡ್ ನಲ್ಲಿ ಚರ್ಚೆಯಾಗುತ್ತಿದೆ. ಆದರೆ ಕೇಂದ್ರದ ಮುಂದೆ ಪ್ರಶಸ್ತಿ ವಾಪಸ್ ಬಗ್ಗೆ ಪ್ರಸ್ತಾವನೆಯೇ ಇಲ್ಲ ಎಂದು ತಿಳಿದು ಬಂದಿದೆ. ಇಡೀ ಪ್ರಕರಣದಲ್ಲಿ ಅಲ್ಲು ಅರ್ಜುನ್ ಪರ ಕೇಂದ್ರ ಸರ್ಕಾರದ ಸಚಿವರು ನಿಂತಿದ್ದಾರೆ. ತೆಲಂಗಾಣ ಕಾಂಗ್ರೆಸ್ ಸರ್ಕಾರದ ಕ್ರಮವನ್ನ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರೋಧಿಸಿದ್ದಾರೆ. ಹೀಗಾಗಿ ಅಲ್ಲುಗೆ ನೀಡಿರುವ ರಾಷ್ಟ್ರೀಯ ಪ್ರಶಸ್ತಿ ವಾಪಸ್ ಪಡೆಯುವ ಸಾಧ್ಯತೆ ಇಲ್ಲ.