- ಮೆಕ್ಸಿಕೋದಲ್ಲಿ ವ್ಯಕ್ತಿಯೊಬ್ಬ ಹಕ್ಕಿಜ್ವರದಿಂದ ಸಾವು
- ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ
ಹಕ್ಕಿಜ್ವರ ದಿಂದ ವಿಶ್ವದಲ್ಲೇ ಮೊದಲ ಸಾವು ಸಂಭವಿಸಿದೆ, ಮೆಕ್ಸಿಕೋದಲ್ಲಿ ವ್ಯಕ್ತಿಯೊಬ್ಬ ಹಕ್ಕಿಜ್ವರ ದಿಂದ ಸಾವನ್ನಪ್ಪಿದ್ದಾರೆ. ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದ್ದು, ಅನೇಕ ದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ಇತ್ತೀಚಿನ ವರದಿಗಳಲ್ಲಿ ಹಸುಗಳು ಮತ್ತು ಹಾಲಿನ ಮೂಲಕ ಮನುಷ್ಯರಿಗೆ ಹರಡುವ ಪ್ರಕರಣಗಳು ಅಮೆರಿಕದ ಅನೇಕ ನಗರಗಳಲ್ಲಿ ವರದಿಯಾಗಿದೆ.
H5N1 ವೈರಸ್ ಅನ್ನು ಪಕ್ಷಿ ಜ್ವರ ಎಂದೂ ಕರೆಯುತ್ತಾರೆ. ಈ ತಿಂಗಳ ಶುರುವಿನಲ್ಲೆ, ಆಂಧ್ರಪ್ರದೇಶ (ನೆಲ್ಲೂರು ಜಿಲ್ಲೆ), ಮಹಾರಾಷ್ಟ್ರ (ನಾಗ್ಪುರ ಜಿಲ್ಲೆ), ಜಾರ್ಖಂಡ್ (ರಾಂಚಿ ಜಿಲ್ಲೆ) ಮತ್ತು ಕೇರಳ (ಆಲಪ್ಪುಳ, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳು) ನಾಲ್ಕು ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ. ಜೂನ್ 5 ಮೆಕ್ಸಿಕೋದಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಹಕ್ಕಿ ಜ್ವರ ಎಂದರೇನು..?
ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ತರುತ್ತದೆ.
ಹಕ್ಕಿ ಜ್ವರ ಮೊದಲು ಬಂದಿದ್ದು ಹೇಗೆ..?
ಈ ವೈರಸ್ ಮೊದಲಿಗೆ 1996ರಲ್ಲಿ ಚೀನಾದಲ್ಲಿ ಪತ್ತೆಯಾಗಿದ್ದು, ನಂತರ ಜಗತ್ತಿನಾದ್ಯಂತ ಹರಡಿತು. ಇತ್ತೀಚಿನ ವರ್ಷಗಳಲ್ಲಿ ಪಕ್ಷಿಗಳು ಮತ್ತು ಸಸ್ತನಿಗಳಲ್ಲಿ ಈ ರೋಗದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಹಕ್ಕಿ ಜ್ವರವು ಸೋಂಕಿತ ಪಕ್ಷಿಗಳು ಅಥವಾ ಅವುಗಳ ಹಿಕ್ಕೆಗಳ ನೇರ ಸಂಪರ್ಕದ ಮೂಲಕ ಹರಡುತ್ತದೆ. ಇಲ್ಲಿಯವರೆಗೆ ಮನುಷ್ಯನಿಂದ ಮನುಷ್ಯನಿಗೆ ಹರಡಿರುವ ಯಾವುದೇ ಪುರಾವೆಗಳಿಲ್ಲ.
ಮೊಟ್ಟೆ ಮತ್ತು ಹಾಲು ಸೋಂಕಿಗೆ ಕಾರಣಾನಾ.?
ಉತ್ಪಾದನೆ ಮತ್ತು ಪ್ಯಾಕೇಜಿಂಗ್ ಸಮಯದಲ್ಲಿ ಮೊಟ್ಟೆಗಳು ಕಟ್ಟುನಿಟ್ಟಾದ ನಿಯಮಗಳು ಮತ್ತು ನೈರ್ಮಲ್ಯ ಪ್ರೋಟೊಕಾಲ್ಗಳನ್ನು ಅನುಸರಿಸಲಾಗುತ್ತದೆ. ಇದು ಮಾಲಿನ್ಯದ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ನೀವು ಮನೆಯಲ್ಲಿ ಅವುಗಳನ್ನು ಹೇಗೆ ನಿರ್ವಹಿಸುತ್ತೀರಿ ಎಂಬುದೇ ಬಹಳ ಮುಖ್ಯವಾಗಿದೆ. ಅದನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಅದರ ಹಳದಿ ಅಂಶ ಕೂಡ ಹಸಿಯಾಗಿರಬಾರದು.