ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದ್ಧಾರೆ. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಕೇಂದ್ರ ಸಚಿವ ಅಮಿತ್ ಶಾ ಗೆ ಟಕ್ಕರ್ ಕೊಟ್ಟಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಾರ್ಟಿ ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ಮಾಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ಬಿಡಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ಹೇಳಿದ್ದಾರೆ.