ನರೇಂದ್ರ ಮೋದಿಯವರು 75 ವರ್ಷಕ್ಕೆ ಕಾಲಿಟ್ಟ ನಂತರ ನಿವೃತ್ತಿಯಾಗುತ್ತಾರೆ ಮತ್ತು ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂಬ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ ಅವರು, ಪ್ರಧಾನಿ ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಸಂತೋಷ ಪಡಬೇಕಾಗಿಲ್ಲ. ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಪ್ರಧಾನಿಯಾಗುತ್ತಾರೆ ಮತ್ತು ಅವರ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.