ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರ ಮದುವೆಗೆ ಬಾಂಬ್ ಬೆದರಿಕೆ ಹಾಕುವ ಪೋಸ್ಟ್ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಗುಜರಾತ್ನ 32 ವರ್ಷದ ಇಂಜಿನಿಯರ್ ಅನ್ನು ಬಂಧಿಸಿದ್ದಾರೆ. ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಜುಲೈ 12 ರಂದು ಕೈಗಾರಿಕೋದ್ಯಮಿಗಳಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು.
ಈ ಸಮಾರಂಭದಲ್ಲಿ ದೇಶದ ಮತ್ತು ವಿಶ್ವದ ಅನೇಕ ದೊಡ್ಡ ವ್ಯಕ್ತಿಗಳು ಭಾಗವಹಿಸಿದ್ದರು. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.
ಬಾಂಬ್ ಬೆದರಿಕೆಯೊಡ್ಡಿದ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಜರಾತ್ನಲ್ಲಿರುವ ಅವರ ನಿವಾಸದಿಂದ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ಅವರನ್ನು ಇಂದು ಬೆಳಗ್ಗೆ ಬಂಧಿಸಿದ್ದಾರೆ.